ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಿಯಾರ: ಮಂದಾರ್ತಿ ಮೇಳ ಪ್ರಧಾನ ವೇಷಧಾರಿ ಸಾಧು ಕೊಠಾರಿಗೆ ರಂಗಸ್ಥಳದಲ್ಲೇ ಹೃದಯಾಘಾತ, ಸಾವು!

ಮಂದಾರ್ತಿ: ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ರಂಗಸ್ಥಳದಲ್ಲೇ ಹೃದಯಾಘಾತಕ್ಕೀಡಾದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಈ ದುರ್ಘಟನೆ ನಡೆದಿದೆ.

ಸಾಧು ಕೊಠಾರಿಯವರು ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕುಣಿಯುತ್ತಿದ್ದ ವೇಳೆ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡ ಅವರನ್ನು ತತ್‍ಕ್ಷಣ ವೇಷ ಕಳಚಿ ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ಆಸ್ಪತ್ರೆಗೆ ಸಾಗಿಸಿದ್ದಾರೆ.

ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ಆಸ್ಪತ್ರೆ ತಲುಪುವಾಗ ಮೃತಪಟ್ಟಿದ್ದಾರೆ.

ಪ್ರಸ್ತುತ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿಯವರು,ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿ ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

Edited By : Nirmala Aralikatti
Kshetra Samachara

Kshetra Samachara

05/01/2021 09:09 am

Cinque Terre

25.34 K

Cinque Terre

15

ಸಂಬಂಧಿತ ಸುದ್ದಿ