ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಾಂಗ್ರೆಸ್‌ನ ಮೈಸೂರು ವಿಭಾಗೀಯ ಸಂಕಲ್ಪ ಸಮಾವೇಶಕ್ಕೆ ಸಜ್ಜು

ಬಂಟ್ವಾಳ: ಬಿ.ಸಿ.ರೋಡಿನಿಂದ ಪಾಣೆಮಂಗಳೂರಿಗೆ ತೆರಳುವ ರಾ. ಹೆ. 75ರ ಸನಿಹವೇ ಇರುವ ಸಾಗರ್ ಆಡಿಟೋರಿಯಂನಲ್ಲಿ ಸಂಕಲ್ಪ ಸಮಾವೇಶ ಹೆಸರಿನ ಕಾಂಗ್ರೆಸ್ ಪಕ್ಷದ ಮೈಸೂರು ವಿಭಾಗೀಯ ಸಮಾವೇಶಕ್ಕೆ ಸಿದ್ಧತೆ ಅದ್ದೂರಿಯಾಗಿ ಬಂಟ್ವಾಳದಲ್ಲಿ ನಡೆಯುತ್ತಿದ್ದು, ಸುಮಾರು 600ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವುದಕ್ಕೆ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ತವರು ಕ್ಷೇತ್ರ ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಕಲ್ಪ ಸಮಾವೇಶಕ್ಕೆ ರೈ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತೆ ನಡೆದವು. ಬಿ.ಸಿ.ರೋಡ್ ಕೈಕಂಬ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಸಹಿತ ಬಂಟ್ವಾಳದ ಸೇತುವೆ ಇಕ್ಕೆಲದಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸಭಾಂಗಣ, ರಸ್ತೆ ಎಡಬಲದಲ್ಲಿ ಕಾಂಗ್ರೆಸ್ ಧ್ವಜ, ಬಂಟಿಂಗ್ಸ್ ಹಾಕಲಾಗಿದ್ದು, ಇಡೀ ಬಿ.ಸಿ.ರೋಡ್ ಪೇಟೆಯಲ್ಲಿ ಹಸ್ತ ಚಿಹ್ನೆಯ ಧ್ವಜಗಳು ರಾರಾಜಿಸುತ್ತಿವೆ.

ಹಾಲ್ ನಲ್ಲಿ ಬೃಹತ್ ಎಲ್ಇಡಿ ಪರದೆ ಸಜ್ಜುಗೊಳಿಸಲಾಗುತ್ತಿದ್ದು, ಪ್ರತಿನಿಧಿಗಳಿಗೆ ವಿಶಾಲ ಪರದೆಯಲ್ಲಿ ಸಭೆಯ ಕಲಾಪ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. .

ಬೆಳಗ್ಗೆ 11 ಗಂಟೆಗೆ ಸಮಾವೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯದ ಉನ್ನತ ಸ್ತರದ ಕಾಂಗ್ರೆಸ್ ನಾಯಕರು, ಮಾಜಿ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಹತ್ವದ ವಿಚಾರಗಳು ಚರ್ಚೆಗೊಳಪಡುವ ಸಾಧ್ಯತೆ ಇದೆ.

ಎಲ್ಲ ವ್ಯವಸ್ಥೆ ಮಾಡಲಾಗಿದ್ದು, ಪ್ರತಿನಿಧಿಗಳಿಗೆ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಜ್ಜುಗೊಳಿಸಿದ್ದೇವೆ ಎಂದು ಈ ಸಂದರ್ಭ ಸಮಾವೇಶದ ನೇತೃತ್ವ ವಹಿಸಿಕೊಂಡಿರುವ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

Edited By : Nagesh Gaonkar
Kshetra Samachara

Kshetra Samachara

05/01/2021 08:14 pm

Cinque Terre

12.99 K

Cinque Terre

1