ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ

ಕುಂದಾಪುರ: ಸ್ತ್ರೀವೇಷಧಾರಿಯಾಗಿ ಪ್ರಸಿದ್ಧಿ ಪಡೆದಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನದ ಹಿರಿಯ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ಅವರು ನಿಧನರಾದರು.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು.

ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿದ್ದರು. ಇವರು 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದರು.

Edited By : Nirmala Aralikatti
Kshetra Samachara

Kshetra Samachara

01/02/2021 04:02 pm

Cinque Terre

6.34 K

Cinque Terre

1

ಸಂಬಂಧಿತ ಸುದ್ದಿ