ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗವೀರ ಪೇಟೆ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 35.00 ಕೋಟಿ ಮಂಜೂರಾಗಿರುತ್ತದೆ. ಸದರಿ ಕಾಮಗಾರಿ ತಕ್ಷಣದಲ್ಲಿ ಆರಂಭಿಸುವ ಸಂಬಂಧ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ತಾಲೂಕು ಪಂಚಾಯತ್ ಸದಸ್ಯರಾದ ಭುಜಂಗ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶಂಕರ್ ಪೂಜಾರಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ವಸಂತ್ ಸೇರ್ವೆಗಾರ್, ಎ. ರಘುವೀರ್ ಕಿಣಿ, ಸುನಿಲ್, ಪಲ್ಲವಿ, ಜ್ಯೋತಿ, ನೀಲಾವರ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಂದ್ರ ಕುಮಾರ್, ಉಮೇಶ್ ಶೆಟ್ಟಿ, ಶಿಲ್ಪಾ ಹರೀಶ್ ರಾವ್ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೇಷ ಕೃಷ್ಣ, ಸಹಾಯಕ ಅಭಿಯಂತರರಾದ ಹರೀಶ್ ಮತ್ತು ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
01/02/2021 10:16 pm