ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ನಾಗರಿಕ ಸಮಿತಿಯಿಂದ ಮತ್ತೆ 2 ಅನಾಥ ಶವಗಳ ಅಂತ್ಯಸಂಸ್ಕಾರ

ಉಡುಪಿ ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಜಿಲ್ಲಾ ನಾಗರಿಕ ಸಮಿತಿ ಮತ್ತೆರಡು ಅನಾಥ ಶವಗಳ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದೆ.

ಈ ಎರಡು ಅನಾಥ ಪುರಷ ಶವಗಳ ಅಂತ್ಯಸಂಸ್ಕಾರವನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಕಾನೂನು ಪ್ರಕ್ರಿಯೆಗಳನ್ನು ನಡೆಸಿ ಪೂರೈಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ ಸಮಕ್ಷಮದಲ್ಲಿ ಬೀಡಿನಗುಡ್ಡೆ ಹಿಂದು ರುದ್ರಭೂಮಿಯಲ್ಲಿ ನಡೆಸಲಾಯಿತು. ರಾಮದಾಸ್ ಪಾಲನ್, ಪ್ರದೀಪ್ ಅಜ್ಜರಕಾಡು, ಸಂತೋಷ ಆಧಾರ್, ಸುಶೀಲಾ ರಾವ್ ಉಡುಪಿ ವಿಷ್ಣು ಈ ಮಾನವೀಯ ಕಾರ್ಯಕ್ಕೆ ಕೈ ಜೋಡಿಸಿದರು.

ಈ ಪೈಕಿ ಓರ್ವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನರೇಂದ್ರ (35ವ) ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಕಳೆದ ಜ.9 ರಂದು ಮೃತಪಟ್ಟಿದ್ದರು. ಇನ್ನೊಬ್ಬ ವ್ಯಕ್ತಿಯ ಮೃತದೇಹವು ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಪತ್ತೆಯಾಗಿತ್ತು. ಎರಡು ಶವಗಳನ್ನು ವಾರಸುದಾರರ ಬರುವಿಕೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರದ ಶೀತಲಿಕರಣ ಘಟಕದಲ್ಲಿ ರಕ್ಷಸಿಡಲಾಗಿತ್ತು. ಕಾಯುವಿಕೆಯ ಕಾಲಮಿತಿ ಕಳೆದರೂ ವಾರಸುದಾರರು ಸಂಪರ್ಕಿಸದೆ ಇರುವುದರಿಂದ ಕಾನೂನಿನಂತೆ ಅಂತ್ಯಸಂಸ್ಕಾರ ನಡೆಸಲಾಯಿತು.

Edited By : Manjunath H D
Kshetra Samachara

Kshetra Samachara

18/02/2021 12:24 pm

Cinque Terre

7.68 K

Cinque Terre

0

ಸಂಬಂಧಿತ ಸುದ್ದಿ