ಮುಲ್ಕಿ: ಮುಲ್ಕಿ ಸಮೀಪದ ಕಿಲ್ಪಾಡಿ ಪಂಚಾಯತ್ ವ್ಯಾಪ್ತಿಯ ಸೀಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನಕ್ಕೆ ಹೋಗುವ ರಸ್ತೆಯ ಇಕ್ಕೆಲಗಳ ಹುಲ್ಲು ಕಟಾವು ಹಾಗೂ ಕಸವನ್ನು ಸ್ವಚ್ಛಗೊಳಿಸುವ ಕಾರ್ಯ ಕಿಲ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ್ ಪಡಂಗ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಅವರು ಮಾತನಾಡಿ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲ ದುಷ್ಕರ್ಮಿಗಳು ಅಲ್ಲಲ್ಲಿ ಕಸವನ್ನು ಎಸೆಯುತ್ತಿದ್ದು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಶಿಮಂತೂರು ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ರಸ್ತೆಯ ಇಕ್ಕೆಲಗಳ ಹುಲ್ಲು ಕಟಾವು ಮಾಡುವುದೇ ಅಲ್ಲದೆ ರಸ್ತೆ ಕೆಲ ಗಳಲ್ಲಿ ಬಿಸಾಡಿರುವ ತ್ಯಾಜ್ಯವನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯಲಿದ್ದು ಗ್ರಾಮಸ್ಥರು ಸ್ವಚ್ಛತೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸ್ವಚ್ಛತೆಗೆ ಕಿಲ್ಪಾಡಿ ಪಂಚಾಯತ್ ಉಪಾಧ್ಯಕ್ಷರು ಸಾಥ್ ನೀಡಿರುವುದು ವ್ಯಾಪಕ ಶ್ಲಾಘನೆಗೆ ಕಾರಣವಾಗಿದೆ. ಶುಕ್ರವಾರ ಬೆಳಗಿನಿಂದ ಹುಲ್ಲು ಕಟಾವು ಮಾಡುವ ಸಿಬ್ಬಂದಿ ಹಾಗೂ ಉಪಾಧ್ಯಕ್ಷರು ತ್ಯಾಜ್ಯವನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ಕೂಡ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಮುಂದಿನ ವಾರದಲ್ಲಿ ನಾಗರಿಕ ಹಾಗೂ ಇತರ ಸೇವಾ ಸಂಸ್ಥೆಗಳ ಜೊತೆ ರಸ್ತೆಯ ಇಕ್ಕೆಲಗಳಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ ಪಡಂಗ ತಿಳಿಸಿದ್ದಾರೆ.
Kshetra Samachara
19/02/2021 03:41 pm