ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಕ್ಷರಂಗದ ಸಿಡಿಲಮರಿ ಖ್ಯಾತಿಯ ಶ್ರೀಧರ ಭಂಡಾರಿ ಇನ್ನು ನೆನಪು ಮಾತ್ರ

ಮಂಗಳೂರು: ಪುಂಡುವೇಷದ ಗಂಡುಗಲಿ, ಧೀಂಗಿಣ ವೀರ ಎಂದೇ ಪ್ರಸಿದ್ಧಿ ಪಡೆದಿದ್ದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಡಾ. ಶ್ರೀಧರ ಭಂಡಾರಿ (73) ವಿಧಿವಶರಾಗಿದ್ದಾರೆ. ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಇವರು ತೆಂಕುತಿಟ್ಟು ಯಕ್ಷಗಾನದಲ್ಲಿ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ನಿವಾಸಿಯಾಗಿದ್ದ ಶ್ರೀಧರ ಭಂಡಾರಿ ಒಂದು ವರ್ಷದ ಹಿಂದೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇಂದು ಮುಂಜಾನೆ ಶ್ರೀಧರ ಭಂಡಾರಿ ನಿಧನರಾಗಿದ್ದು, ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲಾ, ಶಾಂತನಾ, ಪುತ್ರರಾದ ಡಾ ಅನಿಲ, ದೇವಿ ಪ್ರಕಾಶ್ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ತಮ್ಮ 62ನೇ ವಯಸ್ಸಿನಲ್ಲಿ ಖಾಸಗಿ ಸುದ್ದಿವಾಹಿನಿಯ ‘ಶಭಾಶ್ ಇಂಡಿಯಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀಧರ ಭಂಡಾರಿಯವರು 3 ನಿಮಿಷಗಳಲ್ಲಿ 148 ಧೀಂಗಿಣಗಳನ್ನು ಹೊಡೆದಿದ್ದರು. ಕಲಾ ಸೇವೆಗಾಗಿ ಅಮೇರಿಕಾದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಶ್ರೀಧರ ಭಂಡಾರಿ ಅವರನ್ನು ಗೌರವಿಸಿತ್ತು.

ಅಜ್ಜನಿಂದ ಪ್ರಭಾವಿತರಾಗಿ ಯಕ್ಷಗಾನದತ್ತ ಆಕರ್ಷಿತರಾಗಿದ್ದ ಇವರು ಕುರಿಯ ವಿಠಲ ಶಾಸ್ತ್ರಿ ಅವರಿಂದ ಶಾಸ್ತ್ರಬದ್ಧವಾಗಿ ಯಕ್ಷಗಾನ ಅಭ್ಯಾಸ ಮಾಡಿದ್ದರು.

Edited By : Nirmala Aralikatti
Kshetra Samachara

Kshetra Samachara

19/02/2021 05:31 pm

Cinque Terre

15.66 K

Cinque Terre

8

ಸಂಬಂಧಿತ ಸುದ್ದಿ