ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಬ್ಲಡ್ ಡೋನರ್ಸ್ ಫಾರಂ ವತಿಯಿಂದ ರಕ್ತದಾನ

ಉಡುಪಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯದಾದ್ಯಂತ "ರಕ್ತದಾನ ಶಿಬಿರ" ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿ ಸುಮಾರು 200 ಕಿಂತಲೂ ಹೆಚ್ಚು ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಡುಪಿ ವತಿಯಿಂದ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಮಣಿಪಾಲದ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯಲ್ಲಿ ನಡೆಯಿತು.

ಈ ರಕ್ತದಾನ ಶಿಬಿರದ ಸಭಾಕಾರ್ಯಕ್ರಮ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ, ಉಡುಪಿ ಇದರ ಗೌರವ ಅಧ್ಯಕ್ಷರಾಗಿರುವ ಶೇಕ್ ಖಾಲಿದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊಫೆಸರ್ ಹಾಗೂ ಕೆಎಂಸಿ ಆಸ್ಪತ್ರೆ ರಕ್ತನಿಧಿ ವಿಭಾಗದ ಮುಖ್ಯಸ್ಥರಾಗಿರುವ ಡಾಕ್ಟರ್ ಶಮಿ ಶಾಸ್ತ್ರಿ ಯವರು ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿರುವ ಫಯಾಜ್ ಅಹ್ಮದ್, ಆಕ್ಸೆಸ್ ಇಂಡಿಯಾ ತರಬೇತುದಾರ ಹಾಗೂ ಹೆಲ್ತ್ ಕೋಚ್ ಆಗಿರುವ ರಿಜ್ವಾನ್ ಅಬ್ದುಲ್ ರೆಹಮಾನ್ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾಕ್ಟರ್ ಮೀನಾಕುಮಾರಿ ಡಾಕ್ಟರ್ ರಾಜೇಂದ್ರನ್, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಡುಪಿ, ಇದರ ಅಧ್ಯಕ್ಷರಾಗಿರುವ ಸಲ್ಮಾನ್ ಹಾಗೂ ಕಾರ್ಯದರ್ಶಿಯಾಗಿರುವ ಮಹಮ್ಮದ್ ಮುಸ್ತಫಾ ಅವರು ಭಾಗವಹಿಸಿದ್ದರು.

ಮಹಮ್ಮದ್ ಶಫೀಕ್ ನಿರೂಪಿಸಿ ಮಹಮ್ಮದ್ ಮುಸ್ತಫಾ ವಂದಿಸಿದರು.

Edited By : PublicNext Desk
Kshetra Samachara

Kshetra Samachara

14/08/2021 05:48 pm

Cinque Terre

33.49 K

Cinque Terre

0