ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ನಾಡು: "ಯುವಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು"

ಮುಲ್ಕಿ: ರಾಷ್ಟ್ರದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಲ್ಕಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ಮತ್ತು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಕಾರ್ನಾಡು ನೂರಿಯ ಮದರಸದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಉದ್ಘಾಟಿಸಿ ಮಾತನಾಡಿ ರಕ್ತದಾನ ಶ್ರೇಷ್ಠ ದಾನ ವಾಗಿದ್ದು ಯುವಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ನ ಅಧ್ಯಕ್ಷರಾದ ಲಿಯಾಕತ್ ಅಲಿ ವಹಿಸಿದ್ದರು.ಕಾರ್ನಾಡು ನೂರ್ ಜುಮ್ಮಾ ಮಸೀದಿ ಖತೀಬರಾದ ಇಸ್ಮಾಯಿಲ್ ದಾರಿಮಿ ಆಶೀರ್ವಚನ ನೀಡಿದರು. ಶಿಬಿರವನ್ನು ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಸದಸ್ಯರುಗಳಾದ ಪುತ್ತುಬಾವ,ಹಕೀಮ್ ಕಾರ್ನಾಡ್, ಮೆಡಲಿನ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮಾರಿಯೋಲಾ ಬಿ.ಎಸ್, ಎಂ.ಇ ಮೊಹಮ್ಮದ್ ಹನೀಫ್, ಮುಬಿನ್ ಕೋಲ್ನಾಡು, ವೈದ್ಯಾಧಿಕಾರಿ ಡಾ. ಕುನಲ್ ಉಪಸ್ಥಿತರಿದ್ದರು.

ಸುಮಾರು 150ಕ್ಕೂ ಹೆಚ್ಚು ಮಂದಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

15/08/2021 03:50 pm

Cinque Terre

5.67 K

Cinque Terre

0

ಸಂಬಂಧಿತ ಸುದ್ದಿ