ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪತ್ರಕರ್ತ ಇಮ್ತಿಯಾಝ್ ಶಾ ತುಂಬೆಗೆ ಪ್ರತಿಷ್ಠಿತ 'ಬಿ.ಜಿ.ಮೋಹನ್ ದಾಸ್' ಪ್ರಶಸ್ತಿ

ಬಂಟ್ವಾಳ: ಪ್ರಪ್ರಥಮ ಬಾರಿಗೆ ಕನ್ನಡದ ಡಿಜಿಟಲ್‌ ಮೀಡಿಯಾದ ವರದಿಗಾರಿಕೆಗೆ ರಾಜ್ಯ ಮಟ್ಟದಲ್ಲಿ ನೀಡಲಾಗುವ ಪ್ರತಿಷ್ಠಿತ 'ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ'ಗೆ ವಾರ್ತಾಭಾರತಿಯ ಪತ್ರಕರ್ತ ಇಮ್ತಿಯಾಝ್ ಶಾ ತುಂಬೆ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ಗಲ್ಫ್ ದೇಶದ ಮೊದಲ ಕನ್ನಡ ವೆಬ್ ಸೈಟ್ 'ಗಲ್ಫ್ ಕನ್ನಡಿಗ.ಕಾಮ್' ಆರಂಭಿಸಿದ ಬಿ.ಜಿ.ಮೋಹನ್ ದಾಸ್ ಅವರ ಸ್ಮರಣಾರ್ಥ ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ ಸಂಸ್ಥೆ ಈ ಪ್ರಶಸ್ತಿಯನ್ನು ನೀಡುತ್ತಿದೆ. 'ವಾರ್ತಾಭಾರತಿ' ಡಿಜಿಟಲ್ ಆವೃತ್ತಿಯಲ್ಲಿ ಪ್ರಕಟವಾದ ಇಮ್ತಿಯಾಝ್ ಶಾ ತುಂಬೆ ಅವರ 'ನೆಟ್ ವರ್ಕ್ ಬಿಸಿನೆಸ್ ಎಂಬ ಮೋಸದ ಜಾಲ' ಎಂಬ ವಿಶೇಷ ವರದಿ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

ಬಿ.ಜಿ.ಮೋಹನ್ ದಾಸ್ ಅವರ ಮೊದಲ ಪುಣ್ಯಸ್ಮರಣೆ ದಿನವಾದ ಆಗಸ್ಟ್ 31ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ 5,000 ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

Edited By : Nirmala Aralikatti
Kshetra Samachara

Kshetra Samachara

16/08/2021 08:07 pm

Cinque Terre

11.96 K

Cinque Terre

2

ಸಂಬಂಧಿತ ಸುದ್ದಿ