ಮಂಗಳೂರು: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರವು ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು, ಅವರ ಪತ್ನಿ, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದರು.
ಈ ಸಂದರ್ಭ ಕ್ರೈಸ್ತ ಧರ್ಮಗುರುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಆಸ್ಕರ್ ಪತ್ನಿ ಹಾಗೂ ಕುಟುಂಬಸ್ಥರು ಅಂತಿಮ ದರ್ಶನ ಪಡೆದು ದುಃಖತಪ್ತರಾದರು. ಅಲ್ಲದೆ ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಜೆ.ಆರ್.ಲೋಬೊ, ಮಿಥುನ್ ರೈ, ಶಶಿಧರ್ ಹೆಗ್ಡೆ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದರು.
Kshetra Samachara
13/09/2021 07:38 pm