ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಅಗಲಿದ ಆಸ್ಕರಣ್ಣನಿಗೆ ಶ್ರದ್ಧಾಂಜಲಿ

ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಇತ್ತೀಚೆಗೆ ಅಗಲಿದ ಧೀಮಂತ ನಾಯಕ ಓಸ್ಕರ್ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಅರ್ಪಣಾ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಪ್ರಾಸ್ತಾವಿಕ‌ ಮಾತನಾಡಿ ನಾಯಕನ ಗುಣಗಾನ‌ ಮಾಡಿದರೆ ,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನುಡಿನಮನ ಸಲ್ಲಿಸಿದರು.

ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರುಗಳಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿ ಮೊದಲಾದ ನಾಯಕರು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

18/09/2021 05:11 pm

Cinque Terre

5.82 K

Cinque Terre

0

ಸಂಬಂಧಿತ ಸುದ್ದಿ