ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪತ್ರಕರ್ತ ಫಾರೂಕ್ ಬಂಟ್ವಾಳ ಇನ್ನಿಲ್ಲ

ಬಂಟ್ವಾಳ: ಪತ್ರಕರ್ತ ಫಾರೂಕ್ ಬಂಟ್ವಾಳ (42) ಗೂಡಿನಬಳಿಯ ತನ್ನ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 1ರಂದು ಸಂಜೆ ನಿಧನ ಹೊಂದಿದರು. ತಾಯಿ, ಪತ್ನಿ ಮತ್ತು ಮಗಳನ್ನು ಅವರು ಹೊಂದಿದ್ದರು. ಕೆಲ ತಿಂಗಳಿನಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಸುಮಾರು 17 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಬಂಟ್ವಾಳದ ವರದಿಗಾರರಾಗಿ ಅವರು ಕಾರ್ಯನಿರ್ವಹಿಸಿದ್ದು, ಸಮಾಜಸೇವಾಸಕ್ತ, ಸಂಘಟಕರಾಗಿ, ಶಿಕ್ಷಣ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿಯಾಗಿ ದುಡಿದಿದ್ದರು. ಕವಿಯಾಗಿ, ಚುಟುಕು ಸಾಹಿತ್ಯ ರಚನೆಯಲ್ಲಿ ಅವರು ಗಮನ ಸೆಳೆದಿದ್ದು, ಹಲವು ಸಾಹಿತ್ಯ ಸಮ್ಮೇಳನಗಳ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

01/10/2021 05:07 pm

Cinque Terre

8.54 K

Cinque Terre

2

ಸಂಬಂಧಿತ ಸುದ್ದಿ