ಉಡುಪಿ: ಆಳವಾದ ನೀರಿನ ಟ್ಯಾಂಕ್ ನೊಳಗೆ ಬಿದ್ದು ಗಾಯಾಳಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ ಘಟನೆ ಉಡುಪಿಯ ಅಂಬಾಗಿಲು ಎಂಬಲ್ಲಿ ನಡೆದಿದೆ.
ಅಂಬಾಗಿಲುವಿನ ವಾಣಿಜ್ಯ ಸಂಕೀರ್ಣದ ವಠಾರದಲ್ಲಿದ್ದ ನೀರಿನ ಟ್ಯಾಂಕ್ ನೊಳಗೆ ವ್ಯಕ್ತಿಯೊಬ್ಬರು ರಾತ್ರಿ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಗಾಯಾಳಾಗಿ ಅಸಹಾಯಕ ಸ್ಥಿತಿಯಲ್ಲಿದ್ದರು. ಈ ಬಗ್ಗೆ ಮುಂಜಾನೆ ವಿಷಯ ತಿಳಿದ ಸ್ಥಳೀಯ ವಿಶ್ವನಾಥ್ ಎಂಬವರು ಸಮಾಜಸೇವಕರಿಗೆ ವಿಷಯ ಮುಟ್ಟಿಸಿದ್ದರು. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅವರನ್ನು ಯಶಸ್ವಿಯಾಗಿ ಮೇಲಕ್ಕೆತ್ತಿದ್ದಾರೆ.
ಗಾಯಾಳುವನ್ನು ಗುರುರಾಜ್ ಭಟ್ (40 ) ಎಂದು ಗುರುತಿಸಲಾಗಿದೆ. ಸದ್ಯ ಅವರು ಆರೋಗ್ಯವಾಗಿದ್ದು, ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಬಂಧಿಕರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
Kshetra Samachara
27/10/2021 12:23 pm