ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಭ್ರಷ್ಟಾಚಾರ ನಿರ್ಮೂಲನೆಗಾಗಿ "ವಿಜಿಲೆನ್ಸ್ ವೀಕ್ " ,ಮಕ್ಕಳಿಗೆ ವಿವಿಧ ಸ್ಪರ್ಧೆ

ಉಡುಪಿ: ಭ್ರಷ್ಟಾಚಾರ ನಿರ್ಮೂಲನೆಯ ಪರಿಕಲ್ಪನೆಯೊಂದಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ "ವಿಜಿಲೆನ್ಸ್ ವೀಕ್ "ಹಮ್ಮಿಕೊಂಡಿದ್ದು ಇದರ ಅಂಗವಾಗಿ ಚಿತ್ರಕಲಾ ಸ್ಪರ್ಧೆ, ಗಿಡನೆಡುವ ಸ್ಪರ್ಧೆಯಂತಹ ಅನೇಕ ಕಾರ್ಯಕ್ರಮಗಳು ಜರುಗುತ್ತಿವೆ.

ವಿಜಿಲೆನ್ಸ್ ವೀಕ್ ಅಂಗವಾಗಿ ಶಾಲಾ ಮಕ್ಕಳಿಗೆ ಭಾರತ ದೇಶದ ಸಂಸ್ಕೃತಿ ಪರಂಪರೆಯ ವಿಚಾರವಾಗಿ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಂಡಿದ್ದು ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ನಡೆಯಿತು.

ಮಿಷನ್ ಕಂಪೌಂಡ್ ಬಳಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಂಡಿಯಾದ ರೀಜನಲ್ ಮ್ಯಾನೇಜರ್ ವಾಸಪ್ಪ ಅವರು ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಾದ್ಯಂತ ಹಬ್ಬಿಕೊಂಡಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅದರ ಬಗ್ಗೆ ಅರಿವು ಮುಖ್ಯ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಚಟುವಟಿಕೆಗಳನ್ನು ಈ ವಿಜಿಲೆನ್ಸ್ ವೀಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಹೈಸ್ಕೂಲಿನ ಮುಖ್ಯೋಪಾಧ್ಯಾಯಿನಿ ಹೆಲೆನ್ ಸಾಲಿನ್ಸ್ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಜನಜಾಗೃತಿಯ ಅಂಗವಾಗಿ ವಾಕಥಾನ್ ನಡೆಯಿತು.

Edited By : Shivu K
Kshetra Samachara

Kshetra Samachara

29/10/2021 06:17 pm

Cinque Terre

8.12 K

Cinque Terre

0

ಸಂಬಂಧಿತ ಸುದ್ದಿ