ಮುಲ್ಕಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡು ತೋಟ ನಿವಾಸಿ ಮಲ್ಲಿಕಾ ದೇವಾಡಿಗ ರವರಿಗೆ ದಾನಿಗಳ ನೆರವಿನಿಂದ ನಿರ್ಮಿಸಿಕೊಟ್ಟ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮವು ದಾನಿಗಳ ಸಮ್ಮುಖದಲ್ಲಿ ನಡೆಯಿತು.
ಸಾಮಾಜಿಕ ಕಾರ್ಯಕರ್ತೆ ಅರ್ಪಿತ ಶೆಟ್ಟಿ ಪಂಜ ರವರು ಹೊಸಮನೆ ಕೀ ಯನ್ನು ಹಸ್ತಾಂತರಿಸಿದರು.
ಈ ಕಾರ್ಯಕ್ರಮದಲ್ಲಿ ಮುಲ್ಕಿ-ಮೂಡಬಿದ್ರೆ ಬಿಜೆಪಿ ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ ಮುಲ್ಕಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಈಶ್ವರ್ ಕಟೀಲ್, ಬಿಜೆಪಿ ಮಂಡಲ ಉಪಾಧ್ಯಕ್ಷ ಜಯನಂದ ಮುಲ್ಕಿ,ಗ್ರಾ ಪಂ ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು, ಪಂಚಾಯತ್ ಸದಸ್ಯ ದಿನೇಶ್ ಶೆಟ್ಟಿ ಹೊಸಲಕ್ಕೆ, ಪಡುಪಣಂಬೂರು ಹೊಸ ಶಾಲಾ ಕಟ್ಟಡ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾರ್ದನ ಪಡುಪಣಂಬೂರು, ಶ್ಯಾಂಪ್ರಸಾದ್ ಪಡುಪಣಂಬೂರು , ಹೊಸ ಮನೆಯ ನಿರ್ಮಾಣ ಕಾರ್ಯದಲ್ಲಿ ವಿಶೇಷ ಮುತುವರ್ಜಿ ವಹಿಸಿದ ನವೀನ್ ಕೋಟ್ಯಾನ್ ಪಡು ತೋಟ, ಶಿವಾಯ ಫೌಂಡೇಶನ್ ಮುಂಬೈ ನ ಸದಸ್ಯರಾದ ಪ್ರಶಾಂತ್ ಶೆಟ್ಟಿ ಪಂಜ ಉಪಸ್ಥಿತರಿದ್ದರು.
Kshetra Samachara
16/12/2021 08:02 pm