ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ

ಕಾರ್ಕಳ : ಕಾರ್ಕಳ ತಾಲೂಕಿನ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ ಕಾರ್ಯಕ್ರಮವು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಕಳ ಕೆ ಇ ಎಂ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಎಸ್ ಇಮ್ತಿಯಾಜ್ ಅಹ್ಮದ್ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಿಸಿ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್ ಬಿ ಜಗದೀಶ್ ,ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಭೀಮಹುಳಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/01/2022 05:17 pm

Cinque Terre

3.08 K

Cinque Terre

0

ಸಂಬಂಧಿತ ಸುದ್ದಿ