ವಿಟ್ಲ: ನಂಬಲು ಅಸಾಧ್ಯವಾದ ಮತ್ತು ಅಪಾಯಕಾರಿಯಾದ ಏಕಾಂಗಿ ಕಾಯಕದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಆಗಿಸಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರಿಗೆ ಈ ಬಾರಿಯ 'ಪದ್ಮಶ್ರೀ ಪುರಸ್ಕಾರ' ಒಲಿದಿದೆ.
ಬಂಟ್ವಾಳ ತಾಲೂಕಿನ ವಿಟ್ಲದ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 73ರ ಹರೆಯದ ಮಹಾಲಿಂಗ ನಾಯ್ಕ, ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ ಸೌಲಭ್ಯ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾದರು.
ಮಹಾಲಿಂಗ ನಾಯ್ಕ ಏಕಾಂಗಿಯಾಗಿ ಇಂತಹ ಏಳು ಸುರಂಗಗಳನ್ನು ಕೊರೆದ ' ಮಹಾಬಲ' ನೇ ಆಗಿದ್ದಾರೆ!
PublicNext
25/01/2022 10:47 pm