ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು : ಬಡ ವಿದ್ಯಾರ್ಥಿನಿಯ ಮನೆ ಬೆಳಗಿದ ಪುತ್ತೂರು ಶಿಕ್ಷಣ ಅಧಿಕಾರಿಗಳ ತಂಡ....

ಪುತ್ತೂರು : ಶಿಕ್ಷಕ ಮತ್ತು ಶಿಕ್ಷಣ ಇಲಾಖೆ ಓರ್ವ ವಿದ್ಯಾರ್ಥಿಯ ಬೌಧಿಕ ಮಟ್ಟದ ಜೊತೆಗೆ ಆ ವಿದ್ಯಾರ್ಥಿಯ ಮನೆಯನ್ನೂ ಬೆಳಗಿಸುತ್ತದೆ ಎನ್ನುವ ಮಾತಿದೆ. ವಿದ್ಯಾರ್ಥಿಯ ಬೌಧಿಕ ಮಟ್ಟವನ್ನೇನೋ ಶಿಕ್ಷಕ , ಶಿಕ್ಷಣ ಇಲಾಖೆ ಬೆಳೆಸುತ್ತೆ, ಆದರೆ ಆ ವಿದ್ಯಾರ್ಥಿಯ ಮನೆಯನ್ನು ಹೇಗೆ ಬೆಳೆಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರವೊಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ದೊರೆತಿದೆ.

ಇದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭೆಯ ವ್ಯಾಪ್ತಿಗೆ ಬರುವ ಪೆರ್ವತ್ತೋಡಿಯ ಸುನಂದಾ ಎನ್ನುವ ದಲಿತ ವಿಧವೆಯ ನಿರ್ಮಾಣ ಹಂತದಲ್ಲಿರುವ ಮನೆಯ ಕಥೆ.

ಜೋಪಡಿ ಹಾಕಿಕೊಂಡು ಜೀವನ ಸಾಗಿಸುತ್ತಿದ್ದ ಈ ವಿಧವೆ ಹಾಗೂ ಈಕೆಯ ಎರಡು ಹೆಣ್ಣು ಮಕ್ಕಳ ಮನೆಯ ಸ್ಥಿತಿಯನ್ನು ಕಂಡು ಮರುಗಿದವರೇ ಹೆಚ್ಚು. ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸಲು ಸಿದ್ಧಳಾಗಿದ್ದ ಸುನಂದಾ ಅವರ ಎರಡನೇ ಮಗಳಾದ ಅನಿತಾ ಮನೆಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತೆಯನ್ನು ಪರಿಶೀಲಿಸಲೆಂದು ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹಾಗೂ ಪುತ್ತೂರಿನ ಕೊಂಬೆಟ್ಟು ಶಾಲೆಯ ಶಿಕ್ಷಕಿಯಾದ ಗೀತಾಮಣಿ ತಂಡ ಭೇಟಿ ನೀಡಿತ್ತು.

ಭೇಟಿಯ ಸಂದರ್ಭದಲ್ಲಿ ಸುನಂದಾ ಹಾಗೂ ಆಕೆಯ ಮಕ್ಕಳು ಅನುಭವಿಸುತ್ತಿರುವ ಕಷ್ಟ, ಮಕ್ಕಳ ಓದಿಗಾಗಿ ಸುನಂದಾ ಅವರ ಪರದಾಟ ಕಂಡ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರು ಅಂದೇ ಒಂದು ನಿರ್ಧಾರಕ್ಕೆ ಬಂದಿತ್ತು.

ಸುನಂದಾ ಅವರ ಕಷ್ಟವನ್ನು ಕಣ್ಣಾರೆ ಕಂಡ ಶಿಕ್ಷಣಾಧಿಕಾರಿ ಮತ್ತು ಕೊಂಬೆಟ್ಟು ಶಾಲೆಯ ಶಿಕ್ಷಕಿ ಗೀತಾಮಣಿ ಹಕ್ಕುಪತ್ರವಿಲ್ಲದ ಜಮೀನಿಗೆ ಹಕ್ಕುಪತ್ರವನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ.

ಆ ಬಳಿಕ ರೋಟರಿ ಕ್ಲಬ್ ಸಹಾಯದೊಂದಿಗೆ ಇದೀಗ ಸುನಂದಾ ಕುಟುಂಬಕ್ಕೆ ಹೊಸ ಮನೆಯನ್ನೂ ನಿರ್ಮಿಸುತ್ತಿದ್ದು, ಮುಂದಿನ ತಿಂಗಳು ಈ ಮನೆಯ ಗೃಹಪ್ರವೇಶವೂ ನಡೆಯಲಿದೆ.

ಸುನಂದಾ ಬಡತನದಿಂದ ಜೀವನ ಸಾಗಿಸುತ್ತಿದ್ದರೂ, ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡಿದ್ದ ಸುನಂದಾ, ಊರಲ್ಲಿ ಕೂಲಿ-ನಾಲಿ ಮಾಡಿ ಮಕ್ಕಳನ್ನು ಓದಿಸುತ್ತಿದ್ದರು.

Edited By : Shivu K
Kshetra Samachara

Kshetra Samachara

23/06/2022 01:20 pm

Cinque Terre

7.7 K

Cinque Terre

0

ಸಂಬಂಧಿತ ಸುದ್ದಿ