ಉಡುಪಿ: ಜಿಲ್ಲೆಯ ಪ್ರಗತಿಪರ ರೈತ , ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ.ಪೂಜಾರಿ ಪೆರ್ಡೂರು (78) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಉಡುಪಿ ಜಿಲ್ಲಾ ಭಾರತೀಯ ಕಿಸಾನ್ ಸಂಘದಲ್ಲಿ ಮೂರು ಅವಧಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಬಿ.ವಿ.ಪೂಜಾರಿ, ಜಿಲ್ಲೆಯಲ್ಲಿ ರೈತರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರೊಂದಿಗೆ ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳಾದ ಕಾಡುಪ್ರಾಣಿಗಳ ಹಾವಳಿ, ವಿದ್ಯುತ್ ಸಮಸ್ಯೆ, ಹಣ್ಣು ಬಿಡುವ ಮರಬೆಳೆಸುವಂತೆ ರೈತರನ್ನು ಪ್ರೇರೇಪಿಸುವುದು, ಜಿಲ್ಲೆಯಲ್ಲಿನ ನೀರಿನ ಸಮಸ್ಯೆ ಮೊದಲಾದವುಗಳ ಬಗ್ಗೆ ಅತೀವ ಕಾಳಜಿಯನ್ನು ಹೊಂದಿ ನಿರಂತರ ಹೋರಾಟಗಳನ್ನು ನಡೆಸಿದ್ದರು.ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
Kshetra Samachara
02/07/2022 11:28 am