ಕುಂದಾಪುರ: ಬಡಗುತಿಟ್ಟಿನ ಹಿರಿಯ ವೇಷಧಾರಿ ಮಜ್ಜಿಗೆಬೈಲು ಆನಂದ ಶೆಟ್ಟಿ (78) ಕುಂದಾಪುರ ತಾಲೂಕಿನ ಯಡ್ತಾಡಿಯ ಸ್ವಗೃಹದಲ್ಲಿ ರವಿವಾರ ರಾತ್ರಿ ನಿಧನರಾದರು.
ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೆರ್ಡೂರು, ಮಾರಣಕಟ್ಟೆ, ಸಾಲಿಗ್ರಾಮ, ಗೂಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳಗಳಲ್ಲಿ ಸುಮಾರು ನಾಲ್ಕು ದಶಕಗಳ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು. ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.
ಇವರು ಪತ್ನಿ, ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.
PublicNext
11/07/2022 02:10 pm