ಬೈಂದೂರು: ಬೈಂದೂರಿನ ನೆರೆಪೀಡಿತ ಪ್ರದೇಶಗಳಿಗೆ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಭೇಟಿ ನೀಡಿ, ಸ್ಥಳೀಯರಿಗೆ ಧೈರ್ಯ ತುಂಬಿದ್ರು. ಮಳೆ ಅವಾಂತರದಿಂದ ಹಾನಿ ಉಂಟಾದ ಕಡು ಬಡವರ ಮನೆಗಳನ್ನು ಗುರುತಿಸಿ ಮನೆ ನಿರ್ಮಾಣ ಮಾಡುವ ಕೆಲಸ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಮಾಡಲಾಗುವುದು ಎಂದು ಹೇಳಿದರು.
ಹಾಗೇ ಬೈಂದೂರಿನ ಹಲವು ಭಾಗಗಳಲ್ಲಿ ಕಷ್ಟದಲ್ಲಿರುವ ಕುಟುಂಬದವರಿಗೆ ಫುಡ್ ಕಿಟ್ ವಿತರಣೆ ಮಾಡಿದರು. ಈ ಹಿಂದೆ ಕೊರೊನಾ ಸಂದರ್ಭದಲ್ಲಿ 10000 ಕ್ಕೂ ಹೆಚ್ಚು ಫುಡ್ ಕಿಟ್ ವಿತರಣೆ ಮಾಡಿದ್ರು.
Kshetra Samachara
12/07/2022 06:16 pm