ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಂತ್ಯಸಂಸ್ಕಾರ ನಡೆಸಲು ಕುಟುಂಬಕ್ಕೆ ಜಿಲ್ಲಾ ನಾಗರಿಕ ಸಮಿತಿ ನೆರವು

ಉಡುಪಿ: ಮೃತ ವ್ಯಕ್ತಿಯ ಶವಸಂಸ್ಕಾರ ನಡೆಸಲು ಕುಟುಂಬದವರು ಅಸಹಾಯಕರಾದಾಗ ಅವರ ನೆರವಿಗೆ ಜಿಲ್ಲಾ ನಾಗರಿಕ ಸಮಿತಿ ಧಾವಿಸಿದೆ. ಜಿಲ್ಲಾ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಅವರು ಆ ಕುಟುಂಬದ ನೆರವಿಗೆ ನಿಂತು ಬೀಡಿನಗುಡ್ಡೆ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೆಲವು ದಿನಗಳ ಹಿಂದೆ ಅಲೆವೂರು ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ರೋಗಿಯು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

Edited By :
Kshetra Samachara

Kshetra Samachara

28/07/2022 08:40 pm

Cinque Terre

7.82 K

Cinque Terre

1

ಸಂಬಂಧಿತ ಸುದ್ದಿ