ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದ ಚಲ್ಲಿಮಕ್ಕಿಯಲ್ಲಿ ಸೊಸೈಟಿಗಳಿಗೆ ಸಾಫ್ಟ್ ವೇರ್ ಇನ್ ಸ್ಟಾಲ್ ಮಾಡುವ ಕೆಲಸ ಮಾಡಿಕೊಂಡಿದ್ದ ರಂಜನ್ ಗಾಣಿಗ (33 ಎಂಬವರು) ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಂಜನ್ ಗಾಣಿಗ ಯಾವುದೋ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ನಿನ್ನೆ ಬೆಳಿಗ್ಗೆ ತಾವು ವಾಸವಿದ್ದ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುರೇಶ್ ಜಿ. ಎಂಬವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ಕಳಿಸಲಾಗಿದೆ.
ಕೋಟ ಠಾಣಾಧಿಕಾರಿ ಮಧು ಬಿ.ಇ. ಸ್ಥಳಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
30/07/2022 11:38 am