ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಸಾವಿನಲ್ಲೂ ಒಂದಾದರು ಹಿರಿಯ ದಂಪತಿ!

ಕಾಪು: ಮದುವೆಯಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಸಿಹಿ ಕಹಿ, ನೋವು ನಲಿವು, ಸವಾಲುಗಳನ್ನು ಎದುರಿಸಿದ್ದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕಾಪುವಿನ ಬೆಳಪುವಿನಲ್ಲಿ ನಡೆದಿದೆ.

ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಒಂದಾದ ದಂಪತಿ.

ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತ ಪಟ್ಟಿದ್ದು, ಮಕ್ಕಳು ಮುಂಬಯಿ ಸಹಿತ ಬೇರೆ ಕಡೆಗಳಲ್ಲಿ ಇರುವುದರಿಂದ ಅವರ ಶವವನ್ನು ಕುಟುಂಬದ ಮೂಲ ಮನೆಯಲ್ಲಿ ಶೀಥಲೀಕರಣದ ವ್ಯವಸ್ಥೆಯೊಂದಿಗೆ ಮನೆಯಲ್ಲೇ ಇರಿಸಲಾಗಿತ್ತು.

ಇಂದು ಮುಂಜಾನೆ ಮಕ್ಕಳು ಮನೆಗೆ ಬರುತ್ತಲೇ ಅವರ ಮೃತದೇಹವನ್ನು ಸ್ವಂತ ಮನೆಗೆ ತರಲಾಗಿತ್ತು. ಮೃತದೇಹವನ್ನು ಮನೆಯೊಳಗೆ ತಂದು ನೆಲಕ್ಕೆ ಇಟ್ಟ ಕೆಲವೇ ಕ್ಷಣದಲ್ಲಿ ಪತ್ನಿ ರೇವತಿ ಶೆಟ್ಟಿ ಕುಸಿದು ಬಿದ್ದು ಮೃತ ಪಟ್ಟಿದ್ದಾರೆ!

ದಂಪತಿಯ ಮೃತದೇಹವನ್ನು ಮಕ್ಕಳು ಮತ್ತು ಕುಟುಂಬಸ್ಥರು ಸೇರಿ ಸಮಾಜ ಸೇವಕ ಸೂರಿ ಶೆಟ್ಟಿ ನೇತೃತ್ವದಲ್ಲಿ ಬೆಳಪು ಧೂಮಪ್ಪ ಶೆಟ್ಟಿ ಮನೆ ಬಳಿಯ ಜಮೀನಿನಲ್ಲಿ ಸಿದ್ಧ ಪಡಿಸಿದ ಚಿತೆಯಲ್ಲಿ ಜೋಡಿಯಾಗಿಯೇ ಅಂತ್ಯಕ್ರಿಯೆ ನಡೆಸಲಾಯಿತು.

Edited By : Somashekar
Kshetra Samachara

Kshetra Samachara

03/08/2022 04:49 pm

Cinque Terre

11.23 K

Cinque Terre

1

ಸಂಬಂಧಿತ ಸುದ್ದಿ