ಅಜೆಕಾರು: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ದೈಹಿಕ ಶಿಕ್ಷಕರೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ 9ರಂದು ಸಂಜೆ ಸಂಭವಿಸಿದೆ.ಅಜೆಕಾರು ಕೈಕಂಬ ನಿವಾಸಿ ರಾಮಕೃಷ್ಣ ಹೆಗ್ಡೆ(56) ಮೃತ ದೈಹಿಕ ಶಿಕ್ಷಕ. ಇವರು ತಮ್ಮ ಕಡ್ತಲದ ಜಾಗದಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗ ಎದೆನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ಇವರು, ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವರು ಮುನಿಯಾಲು ಕಾಲೇಜು ಸೇರಿದಂತೆ ವಿವಿಧೆಡೆ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.
Kshetra Samachara
10/08/2022 08:51 pm