ಬಜಪೆ:ರಾಷ್ಟ್ರೀಯ ಸೇವಾ ಯೋಜನೆಯ 2020-21 ನೇ ಸಾಲಿನ ರಾಷ್ಟ್ರ ಮಟ್ಟದ ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಗೆ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿನಿ ರಶ್ಮಿ ಜೆ ಅಂಚನ್ ಆಯ್ಕೆಯಾಗಿದ್ದಾರೆ.
ಇವರು ಇತ್ತೀಚೆಗೆ ರಾಜ್ಯ ಮಟ್ಟದ ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಯನ್ನು ಪಡೆದಿದ್ದರು.ಕು.ರಶ್ಮಿ ಜೆ ಅಂಚನ್ ಅವರು ದೆಹಲಿಯಲ್ಲಿ ಭಾರತ ಸರಕಾರ ಕೊಡಲ್ಪಡುವ ಎನ್ ಎಸ್ ಎಸ್ ಸ್ವಯಂ ಸೇವಕಿ ಪ್ರಶಸ್ತಿ ಯನ್ನು ಪಡೆದು ಇಂದು ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರು,ಪದಾಧಿಕಾರಿಗಳು,ಸಂಘ ಸಂಸ್ಥೆಗಳ ಮುಖಂಡರುಗಳು ,ಗಣ್ಯಾತಿಗಣ್ಯರು ಹಾಜರಿದ್ದರು.
PublicNext
25/09/2022 06:49 pm