ಮುಲ್ಕಿ: ಸಮೀಪದ ಕಾರ್ನಾಡ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಮಾರು 50 ಲಕ್ಷ ವೆಚ್ಚದ ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ರೈತ ಸಂಪರ್ಕ ಕೇಂದ್ರ ಅಧಿಕಾರಿಗಳ ಹಾಗೂ ರೈತರ ಸಂಪರ್ಕ ಸೇತುವಾಗಿದ್ದು ಸರಕಾರದಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ಹಾಗೂ ಕೃಷಿಕರಿಗೆ ತಿಳಿಸಿ ಕೃಷಿ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಸರಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಜೊತೆ ಮಾತುಕತೆ ನಡೆಸಿದ್ದು ಸಮಸ್ಯೆ ಬಗೆಹರಿಸಲಾಗುವುದು ಎಂದರು. ಮುಲ್ಕಿ ನ.ಪಂ ಅಧ್ಯಕ್ಷ ಸುಭಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ನಪಂ ಸದಸ್ಯ ಪುತ್ತುಭಾವ ಹರ್ಷ ರಾಜಶೆಟ್ಟಿ,ಅತಿಕಾರಿಬೆಟ್ಟು ಗ್ರಾ ಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ದೇವಪ್ರಸಾದ್ ಪುನರೂರು, ರಂಗನಾಥ ಶೆಟ್ಟಿ, ರಾಜೇಶ್ ಅಮೀನ್, ತಾಲೂಕು ಸಹಾಯಕ ಕೃಷಿ ನಿರ್ದೇಶಕರು ವೀಣಾ ರೈ, ನ. ಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ, , ಕೃಷಿ ಅಧಿಕಾರಿ ವಿ ಎಸ್ ಕುಲಕರ್ಣಿ, ತಾಂತ್ರಿಕ ಸಹಾಯಕ ವೈಎಸ್ ನಿಂಗನ ಗೌಡ್ರು, ಷಣ್ಮುಖ, ಅಕೌಂಟೆಂಟ್ ದಯಾವತಿ, ನಗರ ಪಂಚಾಯತ್ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
17/09/2022 01:01 pm