ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಹೆದ್ದಾರಿ ದುರಸ್ತಿ ಸೋಮವಾರದಿಂದಲೇ ಆರಂಭ; ಎಸ್ಡಿಪಿಐಗೆ ಅಧಿಕಾರಿಗಳ ಭರವಸೆ

ಬಂಟ್ವಾಳ: ತೀವ್ರ ಹದಗೆಟ್ಟಿರುವ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಭಾಗಗಳಲ್ಲಿ ಸೋಮವಾರದಿಂದಲೇ ಹೊಂಡ ಮುಚ್ಚಿ, ದುರಸ್ತಿ ಕಾರ್ಯ ಆರಂಭಿಸುತ್ತೇವೆ ಎಂದು ರಾ.ಹೆ. ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರುಗಳು ಭರವಸೆ ನೀಡಿದನ್ವಯ, ಎಸ್.ಡಿ.ಪಿ.ಐ. ನಡೆಸಲುದ್ದೇಶಿಸಿದ ಪ್ರತಿಭಟನೆ ತಾತ್ಕಾಲಿವಾಗಿ ಕೈಬಿಟ್ಟಿದೆ.

ಶುಕ್ರವಾರ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪಕ್ಷದ ಮುಖಂಡರು ಬಂಟ್ವಾಳ ನಗರ ಠಾಣಾ ಪೊಲೀಸರ ಮಧ್ಯಸ್ತಿಕೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪರವಾಗಿ ಆಗಮಿಸಿದ್ದ ಎಂಜಿನಿಯರುಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ.

ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,ರಾ.ಹೆ.ಯಲ್ಲಿ ಹೊಂಡಗುಂಡಿ ಮುಚ್ಚುವಂತೆ ಆಗ್ರಹಿಸಿ ನ.5ರಂದು ಹೆದ್ದಾರಿ ತಡೆ ಚಳವಳಿ ನಡೆಸಲು ಎಸ್.ಡಿ.ಪಿ.ಐ. ತೀರ್ಮಾನಿಸಿತ್ತು. ಸಮಸ್ಯೆ ಬಗೆ ಹರಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಸಿ ನಮ್ಮ ಜೊತೆ ಚರ್ಚಿಸಲು ಅವಕಾಶ ಮಾಡಲಾಗುವುದು ಎಂದು ಪೊಲೀಸರು ಮಾಡಿದ ಮನವಿಗೆ ಸ್ಪಂದಿಸಿ ಹೆದ್ದಾರಿ ತಡೆ ಚಳವಳಿ ಆ ದಿನ ಕೈ ಬಿಡಲಾಗಿತ್ತು. ಅದರಂತೆ ಇಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ನ. 9ರಿಂದ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

ಸೋಮವಾರದಿಂದ ಕಾಮಗಾರಿ ಆರಂಭಿಸದಿದ್ದರೆ ಕಲ್ಲಡ್ಕದಿಂದ ಪಾಣೆಮಂಗಳೂರು ವರೆಗೆ ಜಾಥಾ ನಡೆಸಿ ಪಾಣೆಮಂಗಳೂರು ಮಾಂಡೋವಿ ಕಾರು ಶೋರೂಂ ಬಳಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ರಾ.ಹೆ. ಅಭಿವೃದ್ಧಿ ಪ್ರಾಧಿಕಾರ ಪರವಾಗಿ ಸಹಾಯಕ ಎಂಜಿನಿಯರ್ ಅನಿರುದ್ದ್, ಸೈಟ್ ಎಂಜಿನಿಯರ್ ನಾಸಿರ್ ಬಂಟ್ವಾಳ ನಗರ ಠಾಣೆ ಎಸ್.ಐ. ಅವಿನಾಶ್ ಉಪಸ್ಥಿತಿಯಲ್ಲಿ ಮಾತನಾಡಿದರು. ಎಸ್.ಡಿ.ಪಿ.ಐ. ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಉಪಾಧ್ಯಕ್ಷ ಮುಹಮ್ಮದ್ ಇಕ್ಬಾಲ್ ಗೂಡಿನಬಳಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ, ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ, ಪುರಸಭಾ ಸದಸ್ಯ ಮುನೀಶ್ ಅಲಿ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

06/11/2020 02:00 pm

Cinque Terre

7.17 K

Cinque Terre

1

ಸಂಬಂಧಿತ ಸುದ್ದಿ