ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕನ್ನಡ ಭವನ ನಿರ್ಮಾಣಕ್ಕೆ ಕೊರೊನಾ ಕರಿಛಾಯೆ

ಬಂಟ್ವಾಳ: ಸಾಹಿತ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸುವುದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಉದ್ದೇಶದಿಂದ 2000ನೇ ಇಸವಿಯಲ್ಲಿ ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕೈಕುಂಜೆಯಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅಂದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ಶಂಕುಸ್ಥಾಪನೆ ಮಾಡಿದ್ದರು. ಅದಾದ ಬಳಿಕ ಹಲವು ಪ್ರಯತ್ನಗಳು ನಡೆದರೂ ಭವನ ನಿರ್ಮಾಣಕ್ಕೆ ಅಡ್ಡಿಯಾಗುತ್ತಿತ್ತು.

ಸಾರ್ವಜನಿಕರ ದೇಣಿಗೆ ಮತ್ತು ಸರ್ಕಾರದ ನೆರವಿನಿಂದ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನಕ್ಕೆ ಹಣಕಾಸಿನ ಕೊರತೆ ಕಾಡುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಹಣಕಾಸಿನ ಪರಿಸ್ಥಿತಿ ಚೆನ್ನಾಗಿಲ್ಲದ ಹೊತ್ತಿನಲ್ಲಿ ಭವನ ನಿರ್ಮಾಣವೂ ಸಂಪೂರ್ಣಗೊಂಡಿಲ್ಲ. ಅತ್ತ ಘೋಷಿತ ಅನುದಾನವೂ ಬಂದಿಲ್ಲ.

ತಾಲೂಕು ಕಸಾಪ ಅಧ್ಯಕ್ಷ ಬಿ. ಮೋಹನ್ ರಾವ್ ಅವರ ನೇತೃತ್ವದಲ್ಲಿ ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿ ಸಂಚಾಲಕ ಕೆ.ಗಂಗಾಧರ ಭಟ್ ಸಹಿತ ಕನ್ನಾಡಭಿಮಾನಿಗಳ ತಂಡ ಭವನ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಸರ್ಕಾರದ ಅನುದಾನ ಹಾಗೂ ಸಾರ್ವಜನಿಕರ ದೇಣಿಗೆಯೊಂದಿಗೆ ಕಟ್ಟಡವನ್ನು ನಿರ್ಮಿಸಿದರೂ ಕೊರೊನಾದಿಂದಾಗಿ ಪೂರ್ಣಗೊಳಿಸಲು ಹಿನ್ನಡೆಯಾಗಿದೆ.

Edited By : Nagesh Gaonkar
Kshetra Samachara

Kshetra Samachara

07/11/2020 10:28 am

Cinque Terre

14.87 K

Cinque Terre

1

ಸಂಬಂಧಿತ ಸುದ್ದಿ