ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ.26ರಂದು ಅಖಿಲ ಭಾರತ ಮುಷ್ಕರ; ಜಿಲ್ಲಾಧಿಕಾರಿಗಳಿಗೆ ಮನವಿ

ಉಡುಪಿ: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿಯು ನ.26 ರಂದು ನಡೆಯಲಿರುವ ಅಖಿಲ ಭಾರತ ಮುಷ್ಕರ ಅಂಗವಾಗಿ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಉಪಾಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ, ವೆಂಕಟೇಶ್ ಕೋಣಿ,ದಾಸಭಂಡಾರಿ,ಉಮೇಶ್ ಕುಂದರ್,ನಳಿನಿ,ರೊನಾಲ್ಡ್, ಉಡುಪಿ ತಾಲೂಕು ಅಧ್ಯಕ್ಷ ರಾದ ಕವಿರಾಜ್ ಎಸ್., ಅಕ್ಷರ ದಾಸೋಹ ಸಂಘದ ಜಿಲ್ಲಾ ಅಧ್ಯಕ್ಷೆ ಜಯಶ್ರೀ, ಕಾರ್ಯದರ್ಶಿ ಸುನಂದಾ, ಮುಖಂಡರಾದ ಕಮಲ, ಬೇಬಿ ಭಂಡಾರಿ, ಸುನೀತಾ ಶೆಟ್ಟಿ, ಅಂಗನವಾಡಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆ ಭಾರತಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

10/11/2020 09:19 am

Cinque Terre

24.83 K

Cinque Terre

1

ಸಂಬಂಧಿತ ಸುದ್ದಿ