ಬಂಟ್ವಾಳ: ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಮತ್ತು ನೂತನ ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ ಅವರಿಗೆ ಗೂಡಿನಬಳಿಯಲ್ಲಿ ಸನ್ಮಾನ ಹಾಗೂ ಕಾರ್ಯಕರ್ತರ ಸಮಾವೇಶ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್ ಮೊಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಇರಾ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಂದಾವರ, ಪುರಸಭೆ ಸದಸ್ಯರಾದ ಲೋಲಾಕ್ಷ, ಅಬೂಬಕ್ಕರ್ ಸಿದ್ದಿಕ್ ಗುಡ್ಡೆಯಂಗಡಿ, ಮಸೀದಿ ಅಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿ ಮೊಹಮ್ಮದ್ ಅಸ್ಲಮ್, ಗೂಡಿನಬಳಿ ವಲಯ ಕಾಂಗ್ರೆಸ್ ಅಧ್ಯಕ್ಷ ಕರೀಂ, ಹಿರಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Kshetra Samachara
14/11/2020 08:22 pm