ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿದ್ಯಾರ್ಥಿ ವೇತನ ಮಂಜೂರಾತಿಯಲ್ಲಿ ವಿಳಂಬ ನೀತಿ ಆರೋಪ

ಮಂಗಳೂರು: ವಿದ್ಯಾರ್ಥಿವೇತನ ಮಂಜೂರಾತಿಯಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದೆ. ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ನಾಯಕರು, ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಇನ್ನೇನು ಆರಂಭಗೊಳ್ಳಲಿದೆ. ಕೊರೊನಾದ ಪರಿಣಾಮದಿಂದ ಜನರ ಆರ್ಥಿಕ ಸ್ಥಿತಿಗತಿಯ ತೀರಾ ಹದಗೆಟ್ಟಿರುವುದರಿಂದ ಪೋಷಕರು ತಮ್ಮ ಮಕ್ಕಳ ಅಡ್ಮಿಶನ್ ಫೀಸ್ ಕಟ್ಟಲು ಪರದಾಡುತ್ತಿದ್ದಾರೆ. ಇನ್ನೊಂದು ಕಡೆ ಶಿಕ್ಷಣ ಸಂಸ್ಥೆಗಳು ಕೂಡ ಅಡ್ಮಿಶನ್ ಫೀಸ್ ಹೆಚ್ಚಿಸಿರುವುದಲ್ಲದೇ ಒಂದೇ ಕಂತಿನಲ್ಲಿ ಎಲ್ಲಾ ಶುಲ್ಕವನ್ನು ಕಟ್ಟಲು ಒತ್ತಾಯಿಸುವ ಮೂಲಕ ಪೋಷಕರಿಗೆ ಗಾಯದ ಮೇಲೆ ಬರೆದಿದ್ದಾರೆ.

ಆದರೆ ಸರಕಾರವು ಈ ಬಗ್ಗೆ ಒಂದು ಮಾರ್ಗಸೂಚಿಯನ್ನು ತರಲು ವಿಫಲವಾಗಿದೆ. ವಿದ್ಯಾರ್ಥಿವೇತನದಲ್ಲಿ ಉಂಟಾಗಿರುವ ಅವ್ಯವಸ್ಥೆಯಿಂದ ರಾಜ್ಯದ ಹಲವು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿ ಬಾರಿ ಸರ್ಕಾರ ಮತ್ತು ಅಲ್ಪಸಂಖ್ಯಾತ ಇಲಾಖೆಯ ಸ್ಕಾಲರ್ಶಿಪ್ ವಿಚಾರದಲ್ಲಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರುವುದರಲ್ಲಿ ವಿಫಲವಾಗಿದೆ. ಮತ್ತು ವಿದ್ಯಾರ್ಥಿಗಳ ಮೇಲೆ ಸರಕಾರವೇ ಕಾರಣವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿ ಆರೋಪಿಸಿದೆ.

Edited By : Nagesh Gaonkar
Kshetra Samachara

Kshetra Samachara

20/11/2020 12:35 pm

Cinque Terre

19.74 K

Cinque Terre

0