ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನೂತನ ಜಿಲ್ಲಾಸ್ಪತ್ರೆ ನಿರ್ಮಾಣ; ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಉಡುಪಿ: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆ ಸಾಮರ್ಥ್ಯದ ನೂತನ ಆಸ್ಪತ್ರೆ ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಸಿದರು.

ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲಭ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನೀಲ ನಕ್ಷೆ ಸಿದ್ಧಪಡಿಸುವಂತೆ ಸಂಬಂಧಪಟ್ಟ ಇಂಜಿನಿಯರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿ.ಪಂ. ಸಿಇಒ ಡಾ.ನವೀನ್ ಭಟ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಹೆಚ್‌ಒ ಡಾ.ಸುಧೀರ್ ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

21/11/2020 05:29 pm

Cinque Terre

8.5 K

Cinque Terre

1