ಬಂಟ್ವಾಳ: ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು.
ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ದೇಶದಲ್ಲಿ ದಿನಗಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ನ್ಯಾಷನಲ್ ವುಮೆನ್ ಫ್ರಂಟ್ ಸದಸ್ಯೆ ಶಹಿಲಾ ತುಂಬೆ, ಕ್ಯಾಂಪಸ್ ಫ್ರಂಟ್ ಬಂಟ್ವಾಳ ಘಟಕ ಕಾರ್ಯದರ್ಶಿ ಸಫ್ರೀನಾ ಮಾತನಾಡಿದರು. ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ಸದಸ್ಯೆ ಝುಲೈಕಾ ನಿರೂಪಿಸಿದರು.
Kshetra Samachara
23/11/2020 07:34 pm