ಮುಲ್ಕಿ: ಮಂಗಳೂರು ಹೊರವಲಯದ ಮೂಡುಶೆಡ್ಡೆ ಗ್ರಾಪಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮೂಡುಶೆಡ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸಹಯೋಗದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಹಾಗೂ ಸುಮಾರು 69 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮ ಮುಂದುವರಿದ ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಮುಲ್ಕಿ ಮೂಡುಬಿದಿರೆ ಶಾಸಕ ಉಮನಾಥ್ ಕೋಟ್ಯಾನ್ ಹಾಗೂ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ನೆರವೇರಿಸಿದರು. ಸ್ಥಳೀಯ ಪಂ. ಸದಸ್ಯರು ಹಾಗೂ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
24/11/2020 09:39 am