ಮುಲ್ಕಿ: ರಾ.ಹೆ. 66 ಸುರತ್ಕಲ್ ಸಮೀಪದ ತಡಂಬೈಲ್ ಎನ್ ಐ ಟಿಕೆ ಮಧ್ಯ ಚೇಳೈರು ಕ್ರಾಸ್ ಮತ್ತು ಸೂರಜ್ ಇಂಟರ್ ನ್ಯಾಶನಲ್ ಹೋಟೆಲ್ ಬಳಿ ಕಳೆದ ಕೆಲವು ತಿಂಗಳಿನಿಂದ ಅನೇಕ ಅಪಘಾತಗಳು ನಡೆಯುತ್ತಿದ್ದು, ಅದರಲ್ಲಿ ಎನ್ ಐಟಿಕೆ ಕ್ರಾಸ್ ಬಳಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ ಅನ್ವಯ ಮಂಗಳೂರು ಸಂಚಾರಿ ವಿಭಾಗದ ಸಹಾಯಕ ಅಯುಕ್ತ ಎಂ.ಎ.ನಟರಾಜ್ ಸ್ಥಳಕ್ಕೆ ಭೇಟಿ ನೀಡಿ, ಮುಂದೆ ಇಂತಹ ಘಟನೆ ನಡೆಯದ ಹಾಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸುರತ್ಕಲ್ ಸಂಚಾರಿ ಠಾಣಾಧಿಕಾರಿ ಮೋಹನ್, ಮಂಗಳೂರು ನಾಗರಿಕ ಸಮಿತಿ ಉಪಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಚೇಳೈರು ಗ್ರಾಪಂ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ನಿರಂಜನ್ ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು.
Kshetra Samachara
25/11/2020 12:48 pm