ಮಂಗಳೂರು: ರಾಜ್ಯಾದ್ಯಂತ ಸಾರಿಗೆ ಬಸ್ ನೌಕರರ ಮುಷ್ಕರ ಇಂದು ಕೂಡ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳಿಗೂ ಮುಷ್ಕರದ ಬಿಸಿ ತಟ್ಟಿದೆ.
ದಿನನಿತ್ಯ ಮಂಗಳೂರಿನಿಂದ ಬೇರೆ ಬೇರೆ ಜಿಲ್ಲೆಗಳಿಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ಇಂದು ತನ್ನ ಸಂಚಾರ ಸ್ಥಗಿತಗೊಳಿಸಿದೆ. ಮಂಗಳೂರಿನ ಬಿಜೈನಲ್ಲಿರುವ ಕೇಂದ್ರ ಬಸ್ ನಿಲ್ದಾಣ ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿದೆ.
ನಗರದಿಂದ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು, ಸುಳ್ಯ ಸೇರಿದಂತೆ ಹಲವು ಕಡೆಗಳಿಗೆ ಸಂಚರಿಸುತ್ತಿದ್ದ ಬಸ್ ಗಳು ಬಂದ್ ಆಗಿವೆ.
ಸರಕಾರಿ ಬಸ್ ನೌಕರರ ಈ ಮುಷ್ಕರದಿಂದಾಗಿ ಬಹುತೇಕ ಮಂದಿ ರೈಲು ಮೂಲಕ ಪ್ರಯಾಣ ಬೆಳೆಸುತ್ತಿದ್ದಾರೆ.
Kshetra Samachara
12/12/2020 12:20 pm