ಉಡುಪಿ: ಸಾರಿಗೆ ನೌಕರರ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ. ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇದೆ.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಡಿಪೋದಿಂದ ಬಸ್ ಗಳು ನಿಲ್ದಾಣಕ್ಕೆ ಬಂದಿವೆ. ಎಲ್ಲ ತಾಲೂಕುಗಳಿಗೆ ಬಸ್ ಸಂಚರಿಸುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 300 ಬಸ್ಸುಗಳ ಓಡಾಟ ನಡೆದಿದೆ.
Kshetra Samachara
12/12/2020 01:45 pm