ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೆರೆಯಂತಾದ ಬಿ.ಆರ್.ಶೆಟ್ಟಿ ಆಸ್ಪತ್ರೆ ಕಾಮಗಾರಿ ಸ್ಥಳ!: ಸನಿಹದ ಕಟ್ಟಡಗಳಿಗೆ ಅಪಾಯ ಭೀತಿ

ಉಡುಪಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಹೃದಯಭಾಗದಲ್ಲಿರುವ ಬಿ.ಆರ್. ಕಂಪೆನಿಯ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಕೃತಕ ಕೆರೆ ಸೃಷ್ಟಿಯಾಗಿದೆ!

ಇದರಿಂದಾಗಿ ಸುತ್ತಮುತ್ತಲಿನ ಪರಿಸರದಲ್ಲಿ ಆತಂಕ ಮತ್ತು ಬಹುಮಹಡಿ ಕಟ್ಟಡಗಳಿಗೆ ಅಪಾಯದ ಸ್ಥಿತಿ ಎದುರಾಗಿದೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಆಸ್ಪತ್ರೆ ನಿರ್ಮಿಸಲು ಹಾಜಿ ಅಬ್ದುಲ್ಲಾ ದಾನವಾಗಿ ನೀಡಿರುವ ೪.೦೭ ಎಕರೆ ಜಾಗವನ್ನು ಸರಕಾರ ಬಿ.ಆರ್.ಶೆಟ್ಟಿ ಮಾಲಕತ್ವದ ಬಿಆರ್‌ಎಸ್ ಆರೋಗ್ಯ ಮತ್ತು ಸಂಶೋಧನಾ ಸಂಸ್ಥೆಗೆ ನೀಡಿತ್ತು.

ಅದರಂತೆ ಸಂಸ್ಥೆಯು ಎರಡು ವರ್ಷಗಳ ಹಿಂದೆ ಸುಮಾರು ೧.೪೦ ಎಕರೆ ಜಾಗದಲ್ಲಿದ್ದ ಹಾಜಿ ಅಬ್ದುಲ್ಲಾ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕೆಡವಿ, ಖಾಸಗಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಲು ಕಾಮಗಾರಿ ಆರಂಭಿಸಿತ್ತು.

ಇದೀಗ ಸುರಿದ ನಿರಂತರ ಮಳೆಯಿಂದಾಗಿ ಬೃಹತ್‌ ಹೊಂಡಮಯವಾಗಿ ಈ ಆಸ್ಪತ್ರೆ ಕಾಮಗಾರಿ ಪ್ರದೇಶದಲ್ಲಿ ಕೃತಕ ಕೆರೆ ಸೃಷ್ಟಿಯಾಗಿದೆ. ಇದರಿಂದ ನೀರು ನಿಂತು, ಸೊಳ್ಳೆಗಳ ತಾಣವಾಗಿ ಮಾರ್ಪಾಟಾಗುವ ಭೀತಿ ಎದುರಾಗಿದೆ.

ಶೀಘ್ರ ಇತ್ತ ಕಡೆ ಗಮನ ಹರಿಸಿ ಮುಂದೆ ಆಗಬಹುದಾದ ಅನಾಹುತ ಸ್ಥಳೀಯಾಡಳಿತ ತಪ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಆಗ್ರಹಿಸಿದ್ದಾರೆ.

Edited By :
Kshetra Samachara

Kshetra Samachara

24/09/2020 04:06 pm

Cinque Terre

9.38 K

Cinque Terre

0

ಸಂಬಂಧಿತ ಸುದ್ದಿ