ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಪ್ರತಿಕೂಲ ಹವಾಮಾನದಿಂದ ಸ್ಪೈಸ್ ಜೆಟ್ ವಿಮಾನಗಳ ವೇಳಾಪಟ್ಟಿಯಲ್ಲಿ ವ್ಯತ್ಯಯಗಳು ಆಗಬಹುದೆಂದು ತಿಳಿಸಲಾಗಿದೆ.
ಟ್ವೀಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸ್ಪೈಸ್ ಜೆಟ್ ಏರ್ ಲೈನ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದ ಪರಿಣಾಮ ಸ್ಪೈಸ್ ಜೆಟ್ ವಿಮಾನಗಳ ಆಗಮನ ಹಾಗೂ ನಿರ್ಗಮನದ ವೇಳಾಪಟ್ಟಿಯಲ್ಲಿ ತೊಡಕು ಉಂಟಾಗಬಹುದು. ಆದ್ದರಿಂದ ವಿಮಾನಗಳ ವೇಳಾಪಟ್ಟಿಯಲ್ಲಿ ವ್ಯತ್ಯಯಗಳಾಗುವ ಹಿನ್ನೆಲೆಯಲ್ಲಿ ಪ್ರಯಾಣಿಕರು bit.ly/2tG9xBx ವೆಬ್‌ಸೈಟ್ ಅನ್ನು ಪರಿಶೀಲಿಸುವಂತೆ ಮನವಿ ಮಾಡಿದೆ.
Kshetra Samachara
11/07/2022 10:15 am