ಕಾರ್ಕಳ: ಗ್ರಾಮಸ್ಥರ ಆರೋಗ್ಯಕ್ಕೆ ತೊಂದರೆಯುಂಟು ಮಾಡುತ್ತಿರುವ ಆದರ್ಶ್ ಇಂಡಸ್ಟ್ರೀಯಲ್ ಕಂಪೆನಿಯನ್ನು ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಕಾರ್ಕಳ ಪರಿಸರ ರಕ್ಷಣಾ ಸಮಿತಿ ವತಿಯಿಂದ ಸಾಣೂರಿನಲ್ಲಿ ಗ್ರಾಮಸ್ಥರು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯವಾದಿ, ಬೆಳ್ಮಣ್ ಗ್ರಾಮ ಪಂಚಾಯತ್ ಸದಸ್ಯೆ ಸಹನಾ ಕುಂದರ್, ಗ್ರಾಮಸ್ಥರ ಕಷ್ಟ ಅರಿತು ಆದರ್ಶ್ ಇಂಡಸ್ಟ್ರೀಯ ಮಾಲಕರು ಕಂಪನಿಯನ್ನು ಬೇರೆಡೆ ಸ್ಥಳಾಂತರಿಸಬೇಕು.
ಪರಿಸರಕ್ಕೆ ಮಾರಕವಾಗಿರುವ ಕಂಪೆನಿಗಳಿಗೆ ಯಾರೂ ಬೆಂಬಲ ನೀಡಬಾರದು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಒಗ್ಗಟ್ಟಾಗಿರುವುದು ಒಳ್ಳೆಯ ಬೆಳವಣಿಗೆ. ಜಾತಿ, ಪಕ್ಷ, ಧರ್ಮ ಬೇಧವಿಲ್ಲದೇ ಇಡೀ ಗ್ರಾಮಸ್ಥರು ಒಗ್ಗೂಡಬೇಕೆಂದು ಹೇಳಿದರು.
Kshetra Samachara
15/02/2022 10:04 pm