ಬೈಂದೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ವಿರೋಧಿಸಿ, ಇಂದು ವಿವಿಧ ಪಕ್ಷ ಹಾಗೂ ಸಂಘಟನೆಗಳು ಕರೆ ಕೊಟ್ಟ ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿ ನಗರ ಬಿಟ್ಟರೆ ಜಿಲ್ಲೆಯ ಬೈಂದೂರಿನಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಆದರೆ, ಬೈಂದೂರಿನಲ್ಲಿ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿವೆ. ಖಾಸಗಿ ವಾಹನ, ರಿಕ್ಷಾ, ಟ್ಯಾಕ್ಸಿ ಚಾಲಕರು ಬಂದ್ ಗೆ ಸಹಕರಿಸಿಲ್ಲ. ಆದರೆ ಕಾಂಗ್ರೆಸ್, ಜೆ.ಡಿ.ಎಸ್. ಮತ್ತು ಸಿ.ಪಿ.ಎಂ. ಪಕ್ಷದ ಕಾರ್ಯಕರ್ತರು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಈ ಹಿನ್ನೆಲೆಯಲ್ಲಿ ಬೈಂದೂರು ಪಟ್ಟಣ ಭಾಗದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
Kshetra Samachara
28/09/2020 01:38 pm