ಮಂಗಳೂರು: ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿಯನ್ನು ಖಂಡಿಸಿ ಮಂಗಳೂರಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ, ಡಿಕೆಶಿ ಆಪ್ತ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಇದೇ ವೇಳೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಮಧ್ಯೆ ಟಯರ್ ಗೆ ಬೆಂಕಿ ಹಚ್ಚಿ ಅನುಮತಿ ಇಲ್ಲದೆ ಪ್ರತಿಭಟಿಸಿದ ಮಿಥನ್ ರೈ ಸೇರಿದಂತೆ ಹಲವಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
Kshetra Samachara
05/10/2020 03:02 pm