ಬೆಳ್ತಂಗಡಿ: ಅಕ್ರಮವಾಗಿ ಪಡಿತರ ಅಕ್ಕಿ ಲಾರಿಯಲ್ಲಿ ತುಂಬಿಸುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕ ಜಂಟಿಯಾಗಿ ನಿನ್ನೆ ಸಂಜೆ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆಯಲ್ಲಿ ನಡೆದಿದೆ. ಈ ವೇಳೆ ಲಾರಿಯಲ್ಲಿ ಲೋಡ್ ಅಗಿದ್ದ ಪಡಿತರ 14 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಸ್ ನಿಲ್ದಾಣದ ಬಳಿ ಸರಕಾರದಿಂದ ಸಿಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸಲು ತಯಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್.ಜೆ ಮತ್ತು ಆಹಾರ ನಿರೀಕ್ಷಕ ವಿಶ್ವ.ಕೆ ಜಂಟಿಯಾಗಿ ಇಂದು ಸಂಜೆ 5 ಗಂಟೆಗೆ ದಾಳಿ ಮಾಡಿ ಪತ್ತೆಹಚ್ಚಿದ್ದಾರೆ.
ಲಾರಿಯಲ್ಲಿ ಒಟ್ಟು 14 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆಯಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಮಹೇಜ್.ಜೆ , ಆಹಾರ ನಿರೀಕ್ಷಕ ವಿಶ್ವ.ಕೆ, ಕೊಕ್ಕಡ ಕಂದಾಯ ನಿರೀಕ್ಷಕ ಪವಡಪ್ಪ ದೊಡ್ಡಮಣಿ,ಕಳಿಯ ಗ್ರಾಮ ಪಂಚಾಯತ್ ಗ್ರಾಮಲೆಕ್ಕಿಗ ಪೃಥ್ವಿರಾಜ್ ಚಾಲಕ ಸಂತೋಷ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
Kshetra Samachara
02/06/2022 08:57 am