ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸರ್ಕಾರ, ಹೈಕೋರ್ಟ್ ಮಾರ್ಗಸೂಚಿಗಳನ್ನು ಪಾಲಿಸಿ ಗಣೇಶ ಹಬ್ಬ ಆಚರಿಸಲು ಡಿಸಿ ಸಲಹೆ

ಮಂಗಳೂರು: ಸರ್ಕಾರ ಹಾಗೂ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಗಣೇಶ ಹಬ್ಬವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳಿಂದ ಅನುಮತಿ ಪಡೆಯಬೇಕು. ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವ ಬರಹವುಳ್ಳ ಬ್ಯಾನರ್ ಅಳವಡಿಕೆ ಬೇಡ. ಶುಭ ಕೋರುವ ಬ್ಯಾನರ್ ಗಳನ್ನು ಅನುಮತಿ ಪಡೆದು ಅಳವಡಿಸಬೇಕು ಎಂದು ಹೇಳಿದರು.

ಮಳೆಗಾಲದ ಹಿನ್ನೆಲೆಯಲ್ಲಿ ಹಾನಿಯಾಗದಂತಹ ಪೆಂಡಾಲ್‍ಗಳನ್ನು ಹಾಕಬೇಕು. ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು. ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು. ಬೃಹತ್ ಗಾತ್ರದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು.

ಧ್ವನಿ ವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು. ನ್ಯಾಯಾಲಯದ ಆದೇಶದಂತೆ ರಾತ್ರಿ ಹತ್ತು ಗಂಟೆಯ ಬಳಿಕ ಧ್ವನಿ ವರ್ಧಕಗಳನ್ನು ಬಳಸದೆ ಗಣೇಶೋತ್ಸವವನ್ನು ಆಚರಿಸುವಂತೆ ಡಿಸಿ ಡಾ.ಕೆ.ವಿ.ರಾಜೇಂದ್ರ ಸಲಹೆ ನೀಡಿದರು.

Edited By : Nirmala Aralikatti
Kshetra Samachara

Kshetra Samachara

27/08/2022 01:34 pm

Cinque Terre

3.58 K

Cinque Terre

1

ಸಂಬಂಧಿತ ಸುದ್ದಿ