ಪುತ್ತೂರು: ನೆಲಕ್ಕುರುಳುವ ಸ್ಥಿತಿಯಲ್ಲಿದ್ದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಂಭೀರ ಸಮಸ್ಯೆಗೆ ಶಿಕ್ಷಣ ಇಲಾಖೆ ಕೊನೆಗೂ ಸ್ಪಂದಿಸಿದೆ. ಶಾಲಾ ಕಟ್ಟಡದ ದುಸ್ಥಿತಿಯ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಬಳಿಕ ಎಚ್ಚೆತ್ತ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಈ ಕಟ್ಟಡದಲ್ಲಿ ಮಕ್ಕಳಿಗೆ ತರಗತಿ ಮಾಡುವುದು ಅಪಾಯಕಾರಿ ಎನ್ನುವುದನ್ನು ಮನದಟ್ಟು ಮಾಡಿಕೊಂಡ ಅಧಿಕಾರಿಗಳು, ಅಪಾಯಕಾರಿ ಕಟ್ಟಡದಲ್ಲಿ ಮಕ್ಕಳಿಗೆ ತರಗತಿ ನಡೆಸುವುದನ್ನು ನಿರ್ಬಂಧಿಸಿದ್ದಾರೆ. ಅಲ್ಲದೆ, ಕಟ್ಟಡದ ಸುತ್ತ ಮಕ್ಕಳು ಹೋಗದಂತೆ ತಡೆಯನ್ನೂ ನಿರ್ಮಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿ ವ್ಯವಸ್ಥೆ ಮಾಡಲಾಗಿದೆ.
Kshetra Samachara
13/01/2022 11:30 am