ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪ್ರಯುಕ್ತ 'ಇನ್ಸ್‌ಪೈರ್ 2022' ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ವಿಠಲ ಸುಪ್ರಜಿತ್ ಐಟಿಐ ಕಾರ್ಯದರ್ಶಿ ಶ್ರೀಪ್ರಕಾಶ್ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಸರಿಯಾದ ಗುರಿ ಇಟ್ಟುಕೊಂಡಾಗ ಜೀವನದಲ್ಲಿ ಯಶಸ್ವಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್.ಎನ್ ಕೂಡೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ, ಭವಾನಿ ರೈ ಕೊಲ್ಯ ಮತ್ತು ಮಂಗೇಶ್ ಭಟ್ ವಿಟ್ಲ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪನ್ಯಾಸಕರು, ಅಧ್ಯಾಪಕರು ಮತ್ತು ಮಕ್ಕಳು ಭಾಗವಹಿಸಿದ್ದರು.
Kshetra Samachara
07/05/2022 05:21 pm