ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ : ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆ - ಕರಾಟೆ ತರಬೇತಿ ಮೂಲಕ ಆತ್ಮ ಸ್ಥೈರ್ಯ ತುಂಬುವ ಕೆಲಸ: ಸಚಿವ ಕೋಟ

ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ರಾಜ್ಯದಲ್ಲಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆ ಕಲೆ ಕರಾಟೆಯ ತರಬೇತಿ ನೀಡುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಮಾನಸಿಕ ದೈಹಿಕ ಸ್ಥೈರ್ಯ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ.

ರಾಜ್ಯದಲ್ಲಿ ಈ ಬಾರಿ 4 ಹೊಸ ವಸತಿ ಶಾಲೆಗಳನ್ನು ಆರಂಭಿಸಲಾಗಿದ್ದು, ಪ್ರಸ್ತುತ 830 ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಈ ಬಾರಿ ಒಂದು ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಲಾಗಿದ್ದು, ಇನ್ನೂ 1500 ಶಿಕ್ಷಕರನ್ನು ನೇಮಕಾತಿ ಮಾಡುವ ಚಿಂತನೆ ಇದೆ ಎಂದರು.

ಇದೇ ಸಂದರ್ಭ ಎಸೆಸೆಲ್ಸಿಯಲ್ಲಿ 622 ಅಂಕ ಗಳಿಸಿದ ಶಾಲೆಯ ವಿದ್ಯಾರ್ಥಿ ರಂಜನ್ ಯು.ಜಿ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವತಿಯಿಂದ ಸಚಿವರನ್ನು ಗೌರವಿಸಲಾಯಿತು.

Edited By :
Kshetra Samachara

Kshetra Samachara

25/07/2022 03:51 pm

Cinque Terre

5 K

Cinque Terre

0

ಸಂಬಂಧಿತ ಸುದ್ದಿ