ಕುಂದಾಪುರ: ಆಗಸ್ಟ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ಎನ್.ಸಿ.ಸಿ ಘಟಕ, ಭಾರತ ಸರ್ಕಾರದ ಭೂವಿಜ್ಞಾನ ಸಚಿವಾಲಯ, ದೆಹಲಿ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ಪುರಸಭೆ ಕುಂದಾಪುರ ಇವರ ಸಹಯೋಗದಲ್ಲಿ " ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ" ಕುರಿತು ಜಾಗೃತಿ ಕಾರ್ಯಕ್ರಮ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ನಡೆಯಿತು.
ಮಣಿಪಾಲದ ಎಂ.ಐ.ಟಿಯ ಸಹಪ್ರಾಧ್ಯಾಪಕ ಡಾ. ಅನಿಶ್ ಕುಮಾರ್ ವಾರಿಯರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು ಸಮುದ್ರದ ಮಾಲಿನ್ಯಕ್ಕೆ ಕಾರಣವಾಗುವ ಅಂಶಗಳು ಮತ್ತು ಸಮುದ್ರದ ಮಾಲಿನ್ಯ ತಡೆಯಲು ಇರುವಂತಹ ಪರಿಹಾರಾತ್ಮಕ ಸಲಹೆಗಳ ಕುರಿತು ಮಾಹಿತಿ ನೀಡಿದರು. ಇನ್ನೋರ್ವ ಅತಿಥಿ ಕುಂದಾಪುರ ಪುರಸಭೆಯ ಪರಿಸರ ವಿಜ್ಞಾನಿ ( Engineer) ಗುರುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ.ಸತ್ಯನಾರಾಯಣ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ರಾಮಚಂದ್ರ ಆಚಾರ್ಯ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳು ಕುಂದಾಪುರ ಸಮುದ್ರ ತೀರಕ್ಕೆ ತೆರಳಿ ತೀರವನ್ನು ಸ್ವಚ್ಛಗೊಳಿಸಿ ಜಾಗೃತಿ ಮೂಡಿಸಿದರು.
Kshetra Samachara
29/08/2022 08:00 pm